For faster navigation, this Iframe is preloading the Wikiwand page for ಪುರಂದರದಾಸ.

ಪುರಂದರದಾಸ

ಪುರಂದರ ದಾಸ
1964 ರ ಭಾರತದ ಅಂಚೆಚೀಟಿಯಲ್ಲಿ ಪುರಂದರ ದಾಸ
ವೈಯಕ್ತಿಕ
ಜನನ
ಶ್ರೀನಿವಾಸ ನಾಯಕ

1484
ಮರಣ2 ಜನವರಿ 1564 (ಶನಿವಾರ)
ಧರ್ಮಹಿಂದೂ ಧರ್ಮ
ಸಂಗಾತಿಸರಸ್ವತಿ ಬಾಯಿ
ಉದ್ಯೋಗಕರ್ನಾಟಕ ಸಂಗೀತ ಗಾಯಕ, ವಿದ್ವಾಂಸ, ಸಂತ, ಕವಿ, ಸಂಯೋಜಕ
ತತ್ವಶಾಸ್ತ್ರದ್ವೈತ, ವೈಷ್ಣವ
ಹಿರಿಯ ಪೋಸ್ಟಿಂಗ್
ಗುರುವ್ಯಾಸರಾಯರು

ಪುರಂದರದಾಸ ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ತಂದೆ ವರದಪ್ಪನಾಯಕ, ತಾಯಿ ರುಕ್ಮಿಣಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇವರು ನಾಯಕ ಜನಾಂಗದವರಿಂದಲೇ ಮಗನಿಗೆ ಶ್ರೀನಿವಾಸ ನಾಯಕ ಎಂದು ಹೆಸರಿಟ್ಟರಂತೆ.

ಜನ್ಮ ಸ್ಥಳ

[ಬದಲಾಯಿಸಿ]

ಆರಗ, ತೀರ್ಥಹಳ್ಳಿ ತಾ|| ಶಿವಮೊಗ್ಗ ಜಿ||

ಈ ಮೊದಲು ಮಹಾರಾಷ್ಟ್ರದ ಪುರಂದರಗಢವು ಪುರಂದರದಾಸರ ಜನ್ಮ ಸ್ಥಳವೆಂದು ನಂಬಲಾಗಿತ್ತು. ಆದರೆ ಕರ್ನಾಟಕ ಸರ್ಕಾರವು ಹಿರಿಯ ಸಂಗೀತಗಾರ ಆರ್.ಕೆ. ಪದ್ಮನಾಭ, ಕರ್ನಾಟಕ ಸರ್ಕಾರದ ಮಾಜಿ ಮಂತ್ರಿ ಲೀಲಾದೇವಿ ಆರ್. ಪ್ರಸಾದ್, ಹಿರಿಯ ವಿದ್ವಾಂಸರಾದ ಎ.ವಿ. ನಾವಡ, ವೀರಣ್ಣ ರಾಜೂರ ಮತ್ತು ಅರಳುಮಲ್ಲಿಗೆ ಪಾರ್ಥಸಾರಥಿ ಅವರನ್ನು ಒಳಗೊಂಡ ತಂಡ ರಚಿಸಿ ಪುರಂದರದಾಸರ ಜನ್ಮಸ್ಥಳದ ಬಗ್ಗೆ ವರದಿ ನೀಡುವಂತೆ ಕೋರಿತ್ತು. ಈ ತಂಡಕ್ಕೆ ಶಿವಾನಂದ ವಿರಕ್ತಮಠರವರು ಸಂಚಾಲಕರಾಗಿದ್ದರು.

ಈ ತಜ್ಞರ ವರದಿಯ ಪ್ರಕಾರ ಪುರಂದರಗಢವು ಪುರಂದರ ಎಂಬ ಹೆಸರನ್ನು ಊರಿನ ಹೆಸರಿನಲ್ಲಿ ಮಾತ್ರ ಹೊಂದಿದ್ದು ಪುರಂದರ ದಾಸರ ಕುರಿತು ಯಾವುದೇ ಐತಿಹಾಸಿಕ-ಸಾಂಸ್ಕೃತಿಕ ದಾಖಲೆ ಹೊಂದಿಲ್ಲ. ತೀರ್ಥಹಳ್ಳಿ ತಾಲೂಕಿನ ಆರಗ ಊರು ಪುರಂದರ ದಾಸರ ಕುರಿತು ಹಲವು ಐತಿಹಾಸಿಕ ಸಾಕ್ಷ್ಯಗಳನ್ನು ಹೊಂದಿದ್ದು ಆರಗವೇ ಪುರಂದರ ದಾಸರ ಜನ್ಮಸ್ಥಳವೆಂದು ಕರ್ನಾಟಕ ಸರ್ಕಾರಕ್ಕೆ ೨೦೧೮ರಲ್ಲಿ ವರದಿ ಸಲ್ಲಿಸಿದೆ.

ವೈರಾಗ್ಯ

[ಬದಲಾಯಿಸಿ]

ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ ಪಂಡರಾಪುರ/ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ ಹಂಪೆಯಲ್ಲಿದ್ದನೆಂದು ತೋರುತ್ತದೆ.

ಐತಿಹ್ಯ

[ಬದಲಾಯಿಸಿ]

ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ, ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆಂದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರು ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ 'ಪುರಂದರದಾಸ' ಎಂಬ ಹೆಸರನ್ನು ಪಡೆದರು.

ತಮ್ಮ ಹೆಂಡತಿಯ ಜ್ಞಾಪಕಾರ್ಥ ರಚಿಸಿದ ಕೀರ್ತನೆ

[ಬದಲಾಯಿಸಿ]
  • ಆದದ್ದೆಲ್ಲ ಒಳಿತೆ ಆಯಿತು
  • ರಚನೆ: ಶ್ರೀ ಪುರಂದರದಾಸರು
  • ರಾಗ : ಪಂತುರಾವಳಿ ; ತಾಳ : ಆದಿತಾಳ

ಆದದ್ದೆಲ್ಲ ಒಳಿತೆ ಆಯಿತು ನಮ್ಮ
ಶ್ರೀಧರ ಸೇವೆ ಮಾಡಲು ಸಾಧನ ಸಂಪತ್ತಾಯಿತು;

ದಂಡಿಗೆ ಬೆತ್ತ ಹಿಡಿಯೊದಕ್ಕೆ
ಮಂಡೆ ಮಾಚಿ ನಾಚುತಲಿದ್ದೆ
ಹೆಂಡತಿ ಸಂತತಿ ಸಾವಿರವಾಗಲಿ
ದಂಡಿಗೆ ಬೆತ್ತ ಹಿಡಿಸಿದಳಯ್ಯ

ಗೋಪಾಳ ಬುಟ್ಟಿ ಹಿಡಿಯೊದಕ್ಕೆ
ಭೂಪತಿಯಂತೆ ಗರ್ವಿಸುತಿದ್ದೆ
ಆ ಪತ್ನೀ ಕುಲ ಸಾವಿರವಾಗಲಿ
ಗೋಪಾಳ ಬುಟ್ಟಿ ಹಿಡಿಸಿದಳಯ್ಯ

ತುಳಸಿ ಮಾಲೆ ಹಾಕುವುದಕ್ಕೆ
ಅರಸನಂತೆ ನಾಚುತಲಿದ್ದೆ
ಸರಸಿಜಾಕ್ಷ ಪುರಂದರ ವಿಠ್ಠಲ
ತುಳಸಿ ಮಾಲೆ ಹಾಕಿಸಿದನಯ್ಯ

ಕವಿ ಮತ್ತು ಸಂಗೀತಗಾರ

[ಬದಲಾಯಿಸಿ]

ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ. "ಕುದುರೆ ಅಂದಣ ಆನೆ ಬಯಸೋದು ನರಚಿತ್ತ
ಪಾದಚಾರಿ ಆಗೋದು ಹರಿ ಚಿತ್ತವಯ್ಯ"

ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿ ಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ 'ಪಿಳ್ಳಾರಿ ಗೀತೆಗಳು' (ಉದಾ: ಲಂಬೋದರ ಲಕುಮಿಕರ...., ಕೆರೆಯ ನೀರನು ಕೆರೆಗೆ ಚೆಲ್ಲಿ.....ಇತ್ಯಾದಿ) ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು ದಾಸ ಸಾಹಿತ್ಯವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.

ಕೀರ್ತನೆಗಳು

[ಬದಲಾಯಿಸಿ]

೧. ಮಾನವ ಜನ್ಮ ದೊಡ್ಡದು,ಇದ
ಹಾನಿ ಮಾಡಲಿಬೇಡಿ ಹುಚ್ಚಪ್ಪಗಳಿರ

ಹೆಚ್ಚಿನ ಕೀರ್ತನೆಗಳಿಗೆ ನೋಡಿ

[ಬದಲಾಯಿಸಿ]

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
  1. "Purandara Dasa is not from Maharashtra, his birth place is Araga in Karnataka | India News - Times of India". The Times of India. August 2018.
{{bottomLinkPreText}} {{bottomLinkText}}
ಪುರಂದರದಾಸ
Listen to this article

This browser is not supported by Wikiwand :(
Wikiwand requires a browser with modern capabilities in order to provide you with the best reading experience.
Please download and use one of the following browsers:

This article was just edited, click to reload
This article has been deleted on Wikipedia (Why?)

Back to homepage

Please click Add in the dialog above
Please click Allow in the top-left corner,
then click Install Now in the dialog
Please click Open in the download dialog,
then click Install
Please click the "Downloads" icon in the Safari toolbar, open the first download in the list,
then click Install
{{::$root.activation.text}}

Install Wikiwand

Install on Chrome Install on Firefox
Don't forget to rate us

Tell your friends about Wikiwand!

Gmail Facebook Twitter Link

Enjoying Wikiwand?

Tell your friends and spread the love:
Share on Gmail Share on Facebook Share on Twitter Share on Buffer

Our magic isn't perfect

You can help our automatic cover photo selection by reporting an unsuitable photo.

This photo is visually disturbing This photo is not a good choice

Thank you for helping!


Your input will affect cover photo selection, along with input from other users.

X

Get ready for Wikiwand 2.0 🎉! the new version arrives on September 1st! Don't want to wait?